ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಒಂದೇ ದಿನ ಸುಮಾರು 17 ಸಾವಿರ ಕೇಸ್ಗಳು ಪತ್ತೆಯಾಗಿವೆ.
ದೇಶದಲ್ಲಿ ಒಂದೇ ದಿನ ಸುಮಾರು 17 ಸಾವಿರ ಕೋವಿಡ್ ಕೇಸ್: 418 ಸಾವಿನ ವರದಿ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,73,105ಕ್ಕೆ ಹಾಗೂ ಮೃತರ ಸಂಖ್ಯೆ 14,894ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾ
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 16,922 ಸೋಂಕಿತರು ಪತ್ತೆಯಾಗಿದ್ದು, 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4,73,105ಕ್ಕೆ ಹಾಗೂ ಮೃತರ ಸಂಖ್ಯೆ 14,894ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 2,71,697 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,86,514 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.