ಚಂಬಾ(ಹಿಮಾಚಲಪ್ರದೇಶ):40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ಆಯ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಚಂಬಾ ಎಂಬಲ್ಲಿ ನಡೆದಿದೆ.
ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು, 30 ಪ್ರಯಾಣಿಕರಿಗೆ ಗಾಯ! - ಐವರು ಸಾವು, 30 ಪ್ರಯಾಣಿಕರಿಗೆ ಗಾಯ
ಸರ್ಕಾರಿ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ 6.45ರ ವೇಳೆ ಚಿಹಿಲಿಯಿಂದ ಚಂಬಾ ಜಿಲ್ಲೆಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿರುವ ಬಸ್ ಇದಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳದಲ್ಲೇ ಸಾವನ್ನಪ್ಪಿರುವವರನ್ನ ಯೊಗೇಶ್ ಕುಮಾರ್(47), ಪೂಜಾ ಕುಮಾರ್(28), ರಾಜೀವ್ ಕುಮಾರ್(37), ಮೈನಿ ರಾಮ್(33), ದಾವತ್ ಅಲಿ(30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತಲುಪಿ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಕೆಲವರ ಪ್ರಾಣ ಉಳಿಸಿದ್ದಾರೆ ಎಂದು ತಿಳಿದು ಬಂದಿದೆ.