ಸಿದ್ದಾಪೂರ್(ಗುಜರಾತ್):20 ಜನ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಜೀಪ್ವೊಂದು ಬೆಳ್ಳಂಬೆಳಗ್ಗೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಗುಜರಾತ್ನ ಸಿದ್ದಾಪೂರ್ದಲ್ಲಿ ನಡೆದಿದೆ.
ಮರಕ್ಕೆ ಡಿಕ್ಕಿ ಹೊಡೆದ ಜೀಪ್... ಸ್ಥಳದಲ್ಲೇ ಐವರ ಸಾವು, 12 ಮಂದಿ ಸ್ಥಿತಿ ಗಂಭೀರ! - ಮರಕ್ಕೆ ಡಿಕ್ಕಿ ಹೊಡೆದ ಜೀಪ್
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಐವರು ಬಲಿಯಾಗಿದ್ದಾರೆ. ಕೆಲಸಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

5 died 12 injured in accident
ಮರಕ್ಕೆ ಡಿಕ್ಕಿ ಹೊಡೆದ ಜೀಪ್
ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಕಾರಣ, ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವನ್ನಪ್ಪಿರುವವರಲ್ಲಿ 7 ವರ್ಷದ ಮಗು ಸಹ ಇದ್ದು, ಉಳಿದಂತೆ ನಾಲ್ವರು ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾಪೂರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.