ಸುರೇಂದ್ರನಗರ(ಗುಜರಾತ್): ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವಿಗೀಡಾದ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದೆ.
ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು - ಸುರೆಂದ್ರನಗರದಲ್ಲಿ ರಸ್ತೆ ಅಪಘಾತ
ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದು, ಅಹಮದಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಸೋಮನಾಥನ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.