ಪಂಜಾಬ್: ಇಲ್ಲಿನ ಕೈರೋನ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರನ್ನ ಭೀಕರವಾಗಿ ಕೊಲೆ ಮಾಡಲಾಗಿದ್ದು, ಮಾರಕಾಸ್ತ್ರ ಬಳಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಾಡಹಗಲೇ ಒಂದೇ ಕುಟುಂಬದ ಐವರ ಭೀಕರ ಹತ್ಯೆ! - ಪಂಜಾಬ್ ಸುದ್ದಿ
ಹಾಡಹಗಲೇ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಕೈರೋನ್ ಎಂಬಲ್ಲಿ ನಡೆದಿದೆ.

ಘಟನೆಯಿಂದ ಇಡೀ ಗ್ರಾಮ ಬೆಚ್ಚಿಬಿದ್ದಿದ್ದು, ಭಯದ ವಾತಾವರಣ ನಿರ್ಮಾಣಗೊಂಡಿದೆ. ಕೊಲೆಯಾದವರನ್ನ ಬ್ರಿಜ್ ಲಾಲ್, ಸಂತ್ ರಾಮ್, ಅಮಂದೀಪ್ ಪತ್ನಿ ಪರಮ್ಜಿತ್, ಜಸ್ಮೀತ್ ಕೌರ್ ಪತ್ನಿ ಸೋನು ಹಾಗೂ ಗುರುಸಾಹೀಬ್ ಸಿಂಗ್ ಪುತ್ರ ಬಕ್ಷಿಶ್ ಸಿಂಗ್ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದವರ ನಾಲ್ವರು ಮಕ್ಕಳು ಬದುಕುಳಿದಿದ್ದು, ಯಾವ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿಯವರೆಗೂ ಲಭ್ಯವಾಗಿಲ್ಲ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಅರಂಭಿಸಿದ್ದು, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಎಸ್ಪಿ ಧ್ರುವ್ ದಹಿಯಾ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.