ಪಿಲಿಭಿತ್ (ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದ್ದು, ಕೇವಲ ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಯುಪಿಯಲ್ಲಿ ಮತ್ತೊಂದು ದುಷ್ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
ಹಥ್ರಾಸ್ ಅತ್ಯಾಚಾರ ಪ್ರಕರಣ ಮಾಸುವ ಮೊದಲೇ ಉತ್ತರ ಪ್ರದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದು, ಇದೀಗ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ.
ನೇಚರ್ ಕಾಲ್ಗೆ ತೆರಳಿದ್ದ ವೇಳೆ ಬಾಲಕಿಯನ್ನ ಅಪಹರಣ ಮಾಡಿರುವ ಕಾಮುಕ ಪಕ್ಕದ ಗದ್ದೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಆಕೆಯ ಸಹಾಯಕ್ಕೆ ಜನರು ದಾವಿಸುತ್ತಿದ್ದಂತೆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಬಾಲಕಿಯನ್ನ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲು ಮಾಡಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೈದ್ಯ ವಿನಿತಾ ಚತುರ್ವೆದಿ, ಬಾಲಕಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಇದೀಗ ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.