ಕೊಚ್ಚಿ: ಕೇರಳದ ಪಟ್ಟಣವೊಂದರಲ್ಲಿ ತಂದೆಯೊಬ್ಬ 54 ದಿನದ ಮಗುವಿನ ಕಪಾಳಕ್ಕೆ ಹೊಡೆದು ಎಸೆದಿದ್ದಾನೆ ಎಂದು ಆರೋಪಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಮಗು ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಘಟನೆ ನಡೆದಿದ್ದು ಹತ್ತಿರದ ಕೋಲೆಂಚೇರಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವನ್ನು ಮೊದಲಿಗೆ ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಗಳ ಗಂಭೀರ ಸ್ವರೂಪವನ್ನು ಪರಿಗಣಿಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗಳು ಮಂಚದ ಮೇಲಿಂದ ಕೆಳಗೆ ಬಿದ್ದಿದ್ದಾಳೆ ಎಂದು ತಂದೆ ವೈದ್ಯರಿಗೆ ತಿಳಿಸಿದ್ದಾನೆ. ಅನುಮಾನ ಗೊಂಡ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.