ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.