ಚಂದ್ರಾಪುರ್(ಮಹಾರಾಷ್ಟ್ರ): ನಿಂತಿದ್ದ ಲಾರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಆರು ಜನ ಸಾವಿಗೀಡಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಂದ್ರಾಪುರ್ ಜಿಲ್ಲೆಯ ಮುಲ್ ತಾಲೂಕಿನ ಕೆಸ್ಲಘಾಟ್‌ನಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಆರು ಜನ ಸಾವು, ಆರು ಜನರಿಗೆ ಗಂಭೀರ ಗಾಯ - ಮಹಾರಾಷ್ಟ್ರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ಮಹಾರಾಷ್ಟ್ರದ ಚಂದ್ರಾಪುರ್ ಜಿಲ್ಲೆಯ ಮುಲ್ ತಾಲೂಕಿನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವಿಗೀಡಾಗಿದ್ದಾರೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಎರಡು ವರ್ಷದ ಬಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಲಕ ಮತ್ತು ಐವರು ಮಹಿಳೆಯರು ಗಂಭೀರವಾಗಿ ಗಾಂಗೊಂಡಿದ್ದು ಚಂದ್ರಾಪುರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಮೃತರು ದೇವರ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.