ಕೃಷ್ಣಗಿರಿ (ಆಂಧ್ರಪ್ರದೇಶ): ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಗೆ ಕಾರು ಡಿಕ್ಕಿ ಹೊಡೆದು ಬಸ್ನಲ್ಲಿದ್ದ ಪ್ರಯಾಣಿಕ ಸೇರಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಲಿಂಗ, ಪ್ರಶಾಂತ್, ಸುರೇಂದ್ರ, ಶಿವಕುಮಾರ್, ದೇವರಾಜ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.