ಜಮ್ಮು/ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದಲ್ಲಿನ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾಪಡೆಯ ಯೋಧರು ಆರು ಮಂದಿ ಉಗ್ರರಕನ್ನು ಹೊಡೆದುರುಳಿಸಿದ್ದಾರೆ. ಜೊತೆಗೆ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಗ್ಯಾಂಡರ್ಬಾಲ್ ಜಿಲ್ಲೆಯ ನಾರನಾಗ್ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಗುರೆಜ್ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಿಂದ (ಎಲ್‌ಒಸಿ) ಭಾರತದ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದರು. ಅಲ್ಲದೆ, ಭಯೋತ್ಪಾದಕರ ಒಳನುಸುಳುವಿಕೆಗೆ ಅನುಕೂಲವಾಗುವ ಉದ್ದೇಶದಿಂದ ಪಾಕಿಸ್ತಾನ ಸೇನೆಯು ಕಳೆದ ಮೂರು ದಿನಗಳಿಂದ ಗುರೆಜ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.