ನೋಯ್ಡಾ(ಉತ್ತರ ಪ್ರದೇಶ): ನೋಯ್ಡಾದಲ್ಲಿರುವ ಚೀನಾದ ಒಪ್ಪೋ(OPPO) ಸ್ಮಾರ್ಟ್‌ಫೋನ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಉದ್ಯೋಗಿಗಳಿಗೆ ಕೊರೊನಾ ಸೋಂಕು ಕಂಡು ಬಂದಿದ್ದು, ಮುಂದಿನ ಸೂಚನೆ ಬರುವವರೆಗೂ ಎಲ್ಲ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ.
OPPO ಕಾರ್ಖಾನೆಯ 6 ಉದ್ಯೋಗಿಗಳಿಗೆ ಕೊರೊನಾ ಸೋಂಕು.. ಸ್ಮಾರ್ಟ್‌ಫೋನ್ ಉತ್ಪಾದನೆ ಬಂದ್ - 6 OPPO ಉದ್ಯೋಗಿಗಳಿಗೆ ಕೊರೊನಾ ಸೋಂಕು
ಚೀನಾದ ಒಪ್ಪೋ(OPPO) ಸ್ಮಾರ್ಟ್‌ಫೋನ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಉದ್ಯೋಗಿಗಳಲ್ಲಿ ಕೊರೊನಾ ಸೊಂಕು ಪತ್ತೆಯಾಗಿದ್ದು, ಕಾರ್ಖಾನೆ ಬಂದ್ ಮಾಡಲಾಗಿದೆ.
ನೋಯ್ಡಾದಲ್ಲಿನ ಕಾರ್ಖಾನೆಯಲ್ಲಿ ಆರು ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಕಾರ್ಖಾನೆಗೆ ಬಾರದಂತೆ ತಿಳಿಸಿದ್ದಾರೆ. ಮುಂದಿನ ಸೂಚನೆವರೆಗೂ ಮನೆಯಲ್ಲಿಯೇ ಇರಬೇಕೆಂದು ಕಂಪನಿ ಕೇಳಿದೆ ಎಂದು ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.
3 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂದು ಒಪ್ಪೋ ಇಂಡಿಯಾ ವಕ್ತಾರರು ಹೇಳಿದ್ದಾರೆ. ಸದ್ಯ ನಮ್ಮ ಕಾರ್ಖಾನೆಯ ಎಲ್ಲಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದೇವೆ. ಪರೀಕ್ಷೆ ವರದಿ ಬಂದ ನಂತರ ನೆಗೆಟಿವ್ ಬಂದವರನ್ನು ಮಾತ್ರ ಕೆಲಸಕ್ಕೆ ಹಾಜರಾಗುವಂತೆ ತಿಳಿಸಲಾಗುವುದು. ಸೋಂಕು ಕಂಡು ಬಂದರೆ ಅಂತವರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.