ಮಂಡಲ್(ಮಧ್ಯಪ್ರದೇಶ): ಒಂದೇ ಕುಟುಂಬದ ಆರು ಸದಸ್ಯರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಓರ್ವ ಆರೋಪಿಯನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾಗಿ ತಿಳಿದು ಬಂದಿದೆ.
ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿಯ ಹತ್ಯೆ: ಆರೋಪಿಯ ಹೊಡೆದು ಕೊಂದ ಸ್ಥಳೀಯರು - ಆರು ಮಂದಿಯ ಕೊಲೆ
ಮಧ್ಯಪ್ರದೇಶದ ಮಂಡಲ್ದಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿಯ ಭೀಕರ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
6 people MURDER
ಯಾವ ಕಾರಣಕ್ಕಾಗಿ ಈ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಮನೆಯೊಳಗೆ ನುಗ್ಗಿರುವ ಇಬ್ಬರು ದುಷ್ಕರ್ಮಿಗಳು ಇಬ್ಬರು ಮಕ್ಕಳು ಹಾಗೂ ನಾಲ್ವರು ಪುರುಷರ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಓರ್ವ ಆರೋಪಿಯನ್ನು ಹಿಡಿದು ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವ ದುಷ್ಕರ್ಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.