ಮುಂಬೈ:ಕೆಲಸ ಕೊಡಿಸುವುದಾಗಿ ನಂಬಿಸಿ 60 ವರ್ಷದ ವೃದ್ಧ, 25 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ.
ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ! - ಯುವತಿ ಮೇಲೆ ಅತ್ಯಾಚಾರ
ಕೆಲಸ ಕೊಡಿಸುವುದಾಗಿ ನಂಬಿಸಿ 60 ವರ್ಷದ ವೃದ್ಧ, 25 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ.
60 years old man raped 25 years old women at Mumbai
ಸಂತ್ರಸ್ತ ಯುವತಿ ಅತೀಯಾದ ರಕ್ತಸ್ರಾವ ಸಮಸ್ಯೆಯಿಂದ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ತಪಾಸಣೆ ನಡೆಸಿದ ವೈದ್ಯರು ಯುವತಿ ಮೇಲೆ ಅತ್ಯಾಚಾರ ನಡೆದಿರುವ ವಿಷಯವನ್ನು
ಖಚಿತ ಪಡಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.