ನವದೆಹಲಿ: ಕೊರೊನಾ ವಿರುದ್ಧ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿರುವ ಪ್ರಮುಖ ಬಯೋಟೆಕ್ ಕಂಪನಿಗಳಾದ ಭಾರತ್ ಬಯೋಟೆಕ್ ಮತ್ತು ಬಯೋಲಾಜಿಕಲ್ ಇ ಗೆ ಭೇಟಿ ನೀಡಲು 64 ವಿದೇಶಿ ರಾಯಭಾರಿಗಳು ಹೈದರಾಬಾದ್ಗೆ ಆಗಮಿಸಿದ್ದಾರೆ.
ಇದನ್ನೂ ಓದಿ:ಕಳೆದ 24 ಗಂಟೆಗಳಲ್ಲಿ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚು
ಭಾರತವು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ರಾಷ್ಟ್ರವಾಗಿದೆ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಜಾಗತಿಕ ಪ್ರಯತ್ನಗಳಿಗೆ ಗಮನಾರ್ಹ ಕೊಡುಗೆ ನೀಡುತ್ತಿದೆ. ಭಾರತದ ಲಸಿಕೆ ಅಭಿವೃದ್ಧಿ ಪ್ರಯತ್ನಗಳಲ್ಲಿ ಹೆಚ್ಚಿನ ಆಸಕ್ತಿ ಇದೆ ಎಂದು ಮೂಲಗಳು ತಿಳಿಸಿವೆ.
ಈ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಸಹಾಯ ಮಾಡಲು ಭಾರತದ ಲಸಿಕೆ ಉತ್ಪಾದನೆ ಮತ್ತು ವಿತರಣಾ ಸಾಮರ್ಥ್ಯವನ್ನು ಬಳಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ನವೆಂಬರ್ 28 ರಂದು ಅಹಮದಾಬಾದ್‌ನ ಝೈಡಸ್ ಬಯೋಟೆಕ್ ಪಾರ್ಕ್, ಹೈದರಾಬಾದ್‌ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ:ತಾವೇ ಫೀಲ್ಡಿಗಿಳಿದು ಅಕ್ರಮ ಮದ್ಯ ಸೀಜ್ ಮಾಡಿದ ಧರ್ಮಪುರಿ ಸಂಸದ
ಭಾರತ್ ಬಯೋಟೆಕ್ ಸೋಮವಾರ ತನ್ನ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆ 'ಕೊವಾಕ್ಸಿನ್' ಗಾಗಿ ತುರ್ತು ಬಳಕೆಯ ಅನುಮತಿಗಾಗಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಅರ್ಜಿ ಸಲ್ಲಿಸಿತ್ತು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಲಸಿಕೆಗಾಗಿ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಅರ್ಜಿ ಸಲ್ಲಿಸಿದ ನಂತರ, ಲಸಿಕೆಯ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಎರಡನೇ ಭಾರತೀಯ ಕಂಪನಿ ಇದಾಗಿದೆ.