ಕರ್ನಾಟಕ

karnataka

ನವದೆಹಲಿ ವಿಧಾನಸಭೆ ಚುನಾವಣೆ ರಂಗು.. ಕಣದಲ್ಲಿ ಅಂತಿಮವಾಗಿ 668 ಅಭ್ಯರ್ಥಿಗಳು..

ನಾಮಪತ್ರ ಸಲ್ಲಿಸುವ ಅಂತಿಮ ದಿನವೇ 700 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಒಟ್ಟು 1,029 ಅಭ್ಯರ್ಥಿಗಳು 1,528 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು. ಅದರಲ್ಲಿ 698 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

By

Published : Jan 25, 2020, 1:28 PM IST

Published : Jan 25, 2020, 1:28 PM IST

Updated : Jan 25, 2020, 2:45 PM IST

Total candidates in Delhi elections,ನವದೆಹಲಿ ವಿಧಾನಸಭೆ ಚುನಾವಣೆ
ನವದೆಹಲಿ ವಿಧಾನಸಭೆ ಚುನಾವಣೆ

ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ರಂಗು ಪಡೆದುಕೊಂಡಿದೆ. ಒಟ್ಟು 668 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದುಕೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಸುವ ಅಂತಿಮ ದಿನವೇ 700 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಒಟ್ಟು 1,029 ಅಭ್ಯರ್ಥಿಗಳು 1,528 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು. ಅದರಲ್ಲಿ 698 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಮಪತ್ರ ಹಿಂಪಡೆಯಲು ಅಂತಿಮ ದಿನವಾದ ಶುಕ್ರವಾರ ಒಟ್ಟು 30 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ. ಹೀಗಾಗಿ ಕಣದಲ್ಲಿ ಒಟ್ಟು 668 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಫೆಬ್ರವರಿ 8 ರಂದು ಒಟ್ಟು 70 ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆ.11ಕ್ಕೆ ಫಲಿತಾಂಶ ಹೊರಬೀಳಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಪಡೆಯಲು ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕಸರತ್ತು ನಡೆಸುತ್ತಿವೆ.

ಮತದಾರರ ಅಂತಿಮ ಪಟ್ಟಿಯ ಪ್ರಕಾರ 1.46 ಕೋಟಿಗೂ ಹೆಚ್ಚು ಜನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

Last Updated : Jan 25, 2020, 2:45 PM IST

ABOUT THE AUTHOR

...view details