ತಮಿಳುನಾಡು:ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ನಗರದ ಬೀದಿಗಳು ಸಂಪೂರ್ಣ ಜಲಾವೃತಗೊಂಡಿದೆ. ಅಷ್ಟೆ ಅಲ್ಲದೆ ಕೊಯಮತ್ತೂರಿನಲ್ಲಿ ಮನೆಯ ಗೋಡೆಗಳು ಕುಸಿದು ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡಿನಲ್ಲಿ ಭಾರಿ ಮಳೆ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ - Tamil Nadu Rain news
ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗಿದ್ದು, ಕೊಯಮತ್ತೂರಿನಲ್ಲಿ ಮನೆಯ ಗೋಡೆಗಳು ಕುಸಿದು 16ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಈಗಾಗಲೆ ನಿನ್ನೆ ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಹಲವು ಮನೆಗಳಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜೊತೆ ಇಂದು ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳಯಂ ಬಳಿ ನಾಡೂರಿನಲ್ಲಿ ಕೆಲವು ಮನೆಗಳ ಗೋಡೆಗಳು ಕುಸಿದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ ಇದರಿಂದಾಗಿ ಸಾರ್ವಜನಿಕರ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮೃತರ ಕುಟುಂಬಕ್ಕೆ ಸಿಎಂ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಹಾಗಾಗಿ ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿರುವಳ್ಳೂರು ತೂತುಕುಡಿ, ರಾಮನಾಥಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಕಡಲೂರು,ಚೆನ್ನೈ ನಗರಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ.