ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನು ಕೊವಿಡ್-19 ಟೆಸ್ಟ್ಗೆ ಒಳಪಡಿಸಿದಾಗ, ಆತನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಅವನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನ ಪೊಲೀಸರನ್ನು ಸಹ ಕ್ವಾರಂಟೈನ್ಗೆ ಕಳುಹಿಸಲಾಗಿದೆ.
ಕೌಟುಂಬಿಕ ಕಲಹದಿಂದ ಬಂಧಿತನಾದ ವ್ಯಕ್ತಿ ಏಳು ಜನ ಪೊಲೀಸರನ್ನೇ ಕ್ವಾರಂಟೈನ್ಗೆ ಕಳಿಸಿದ!
ಕೌಟುಂಬಿಕ ಕಲಹ ಹಿನ್ನೆಲೆ ಬಂಧಿಯಾದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನ ಪೊಲೀಸರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ.
ಶ್ರೀನಗರದಲ್ಲಿ ಏಳು ಪೊಲೀಸರು ಕ್ವಾರಂಟೈನ್
ಶ್ರೀನಗರದ ರೈನಾವರಿ ಪ್ರದೇಶದ ಕಲೈ-ಅಂದಾರ್ ನಲ್ಲಿ, ಪತ್ನಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿತನಾಗಿದ್ದ. ನಂತರ ಆತನಿಗೆ ಕೆಮ್ಮು-ಜ್ವರ ಕಾಣಿಸಿಕೊಂಡ ಹಿನ್ನೆಲೆ ಆತನನ್ನು ಕೋವಿಡ್-19 ಟೆಸ್ಟ್ಗೆ ಒಳಪಡಿಸಲಾಗಿತ್ತು.
ಈತನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಏಳು ಜನ ಪೊಲೀಸರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಕ್ವಾರಂಟೈನ್ನಲ್ಲಿರಿಸಲಾಗಿದೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.