ನವದೆಹಲಿ: ಬಿಹಾರದಲ್ಲಿಮಹಾಘಟಬಂಧನ್ ಮಣಿಸಿ ಮತ್ತೆ ಅಧಿಕಾರದ ಗದ್ದುಗೆ ಏರಿರೋ ಎನ್ಡಿಎ ಮೈತ್ರಿಕೂಟ ಸರ್ಕಾರದಲ್ಲಿಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಎಂಟು ಮಂತ್ರಿಗಳು ಅಪರಾಧ ಪ್ರಕರಣಗಳನ್ನು ಎದುರುಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ವಿರುದ್ಧ ಅಪರಾಧ ಪ್ರಕರಣಗಳಿವೆ ಎಂದು ನಾಮಪತ್ರ ಸಲ್ಲಿಸುವ ವೇಳೆ ತಾವು ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿರುವುದಾಗಿ (ಎಡಿಆರ್) ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ (ಬಿಹಾರ ಚುನಾವಣಾ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್) ವರದಿ ತಿಳಿಸಿದೆ.
ಚುನಾವಣೆಯಲ್ಲಿ ಜಯಗಳಿಸಿದ 14 ಮಂತ್ರಿಗಳ ಅಫಿಡವಿಟ್‌ಗಳನ್ನು ಪರಿಶೀಲಿಸಿದ್ದು, ಈ ಪೈಕಿ ಆರು (ಶೇ. 43) ಮಂತ್ರಿಗಳು ತಮ್ಮ ವಿರುದ್ಧ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ಇವೆ ಎಂದು ಘೋಷಿಸಿಕೊಂಡಿದ್ದಾರೆ. ಬಿಜೆಪಿ ಮತ್ತು ಜೆಡಿಯುನಲ್ಲಿ ತಲಾ ಇಬ್ಬರು, ಹೆಚ್ಎಂಎಂ ಮತ್ತು ವಿಐಪಿ ತಲಾ ಒಬ್ಬರು ಈ ರೀತಿಯ ಪ್ರಕರಣಗಳನ್ನು ಎದುರಿಸುತ್ತಿವುದಾಗಿ ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.