ಜಬಲ್ಪುರ/ಭರತ್ಪುರ: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 8 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರದ ರಾಷ್ಟ್ರೀಯ ಹೆದ್ದಾರಿ -30ರಲ್ಲಿ ಬೊಲೆರೊ ಮತ್ತು ಟ್ರಕ್ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಮೃತರನ್ನು ಪಂಕಜ್ ಬರ್ಮನ್ (23), ಸುರ್ಜೀತ್ ಧುರ್ವೆ (22), ಮೋಹಿತ್ ಶರ್ಮಾ (22) ಮತ್ತು ಬೊಲೆರೊ ಮಾಲೀಕ ಅರುಣ್ ಕೋಲ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜಸ್ಥಾನದ ಭರತ್ಪುರದಲ್ಲಿ ಟ್ರಕ್ ಮತ್ತು ಪಿಕಪ್ ಮುಖಾಮುಖಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಮಾಹಿತಿಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.