ಕಣ್ಣೂರು(ಕೇರಳ):ಸ್ಪೋರ್ಟ್ಸ್ ತರಬೇತಿಗಾಗಿ ಆಗಮಿಸಿದ್ದ ವೇಳೆ ಎಂಟು ವಿದ್ಯಾರ್ಥಿನಿಯರ ಮೇಲೆ ಕಾಮುಕ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನಲ್ಲಿ 8 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ! - ಕೇರಳದ ಕಣ್ಣೂರು
ಕಾಮುಕ ಶಿಕ್ಷಕನೋರ್ವ ಎಂಟು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
![ಕಣ್ಣೂರಿನಲ್ಲಿ 8 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ! Students sexually assaulted](https://etvbharatimages.akamaized.net/etvbharat/prod-images/768-512-5215596-thumbnail-3x2-wdfdf.jpg)
ಸಾಂದರ್ಭಿಕ ಚಿತ್ರ
ಪಯ್ಯವೂರ್ನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ಸ್ಪೋರ್ಟ್ಸ್ ತರಬೇತಿಗಾಗಿ ಆಗಮಿಸಿ ಹಾಸ್ಟೇಲ್ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಅವರೊಂದಿಗೆ ಇದ್ದ ಶಿಕ್ಷಕ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಈಗಾಗಲೇ ಶಿಕ್ಷಕನನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡ ಬಳಿಕ ಕಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.