ಕರ್ನಾಟಕ

karnataka

ETV Bharat / bharat

ಸಿಡಿಲು ಬಡಿದು ಬಿಹಾರದಲ್ಲಿ ಒಂದೇ ದಿನ 83 ಜನರ ಸಾವು! - ಸಿಡಿಲಿಗೆ 83 ಜನರು ಸಾವು

ಬಿಹಾರದಲ್ಲಿ ಸಿಡಿಲು ಬಡಿದು ಒಂದೇ ದಿನ 83 ಜನರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮುಖ್ಯಮಂತ್ರಿ ನಿತೀಶ್​ ಕುಮಾರ್​ ಹಾಗೂ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

83 killed in lightning strikes in Bihar
83 killed in lightning strikes in Bihar

By

Published : Jun 25, 2020, 9:20 PM IST

ಪಾಟ್ನಾ: ಸಿಡಿಲು ಬಡಿದು ಬಿಹಾರದಲ್ಲಿ ಒಂದೇ ದಿನ 83 ಜನರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಸಿಡಿಲಿಗೆ ಬಲಿಯಾಗಿದ್ದಾರೆ.

ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಸಿಡಿಲಿಗೆ ಒಂದೇ ದಿನ ಬಿಹಾರದ ವಿವಿಧ ಭಾಗಗಳಲ್ಲಿ ಇಷ್ಟೊಂದು ಜನರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಗೋಪಾಲ್​ಗಂಜ್​​ನಲ್ಲೇ 13 ಮಂದಿ ಸಾವನ್ನಪ್ಪಿದ್ದು, ಮಧುಬನಿಯಲ್ಲಿ 8 ಜನರು ಬಲಿಯಾಗಿದ್ದಾರೆ. ಉಳಿದಂತೆ ಪೂರ್ವ ಚಂಪಾರಣ್​​ನಲ್ಲಿ 5, ಸಿವಾನ್​​, ಬಾಗಲ್​ಪುರ್​ದಲ್ಲಿ ತಲಾ 6 ಮಂದಿ ಸಾವನ್ನಪ್ಪಿದ್ದಾರೆ.

ಸಿಡಿಲು ಬಡಿದು ಸಾವನ್ನಪ್ಪಿರುವವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ನಿತೀಶ್​ ಕುಮಾರ್,​​ ಪ್ರತಿ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಉತ್ತರಪ್ರದೇಶದಲ್ಲಿ 24 ಜನರು ಸಿಡಿಲು ಬಡಿದು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದು, ಉತ್ತರಪ್ರದೇಶ, ಬಿಹಾರದಲ್ಲಿ ಮಳೆ ಹಾಗೂ ಸಿಡಿಲು ಬಡಿದು ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ಗೊತ್ತಾಯಿತು. ರಾಜ್ಯ ಸರ್ಕಾರಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.

ABOUT THE AUTHOR

...view details