ಚೆನ್ನೈ: ತಮಿಳುನಾಡು ರಾಜಭವನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 84 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ.
ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾಗಿದೆ.
ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ಸೋಂಕಿತ ಸಿಬ್ಬಂದಿಯ ಪೈಕಿ ಯಾರೂ ಕೂಡ ರಾಜ್ಯಪಾಲರೊಂದಿಗೆ ಸಂಪರ್ಕಕ್ಕೆ ಬಂದಿರಲಿಲ್ಲ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಭಾರತದ ಕೋವಿಡ್ ಪೀಡಿತ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಈವರೆಗೆ 1,86,492 ಸೋಂಕಿತರು ಪತ್ತೆಯಾಗಿದ್ದು, 3144 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.