ರಾಂಚಿ (ಜಾರ್ಖಂಡ್): ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವಂತಹ ಪ್ರಚೋದನಾಕಾರಿ ಪೋಸ್ಟ್ ಮತ್ತು ವದಂತಿಗಳನ್ನು ಹಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೋಷಿಯಲ್ ಮೀಡಿಯಾದಲ್ಲಿ ದ್ವೇಷ ಹರಡುವ ಪ್ರಚೋದನಾ ಪೋಸ್ಟ್: 89 ಮಂದಿ ಬಂಧನ
ಜಾರ್ಖಂಡ್ನ ರಾಂಚಿಯಲ್ಲಿ ದ್ವೇಷ ಹರಡುವಂತಹ ಪ್ರಚೋದನಾಕಾರಿ ಹಾಗೂ ವದಂತಿ ಪೋಸ್ಟ್ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧ 89 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ವಿಚಾರ, ವದಂತಿ ಪೋಸ್ಟ್: 89 ಮಂದಿ ಬಂಧನ
ಪೊಲೀಸ್ ಪ್ರಧಾನ ಕಚೇರಿಯ ದಾಖಲೆಗಳ ಪ್ರಕಾರ, ಧನ್ಬಾದ್, ಪಲಮೌ ಮತ್ತು ಗರ್ಹ್ವಾ ಜಿಲ್ಲೆಗಳಲ್ಲಿ ಅತೀ ಹೆಚ್ಚು ಆರೋಪಿಗಳು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 8 ಆಪಾದಿತರನ್ನು ವಶಕ್ಕೆ ಪಡೆಯಲಾಗಿದೆ.
ಸುಳ್ಳು ಸುದ್ದಿ, ಜನರನ್ನು ದಾರಿ ತಪ್ಪಿಸುವಂತಹ ತಪ್ಪು ಮಾಹಿತಿ ಮತ್ತು ದ್ವೇಷದ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರ ವಿರುದ್ಧ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.