ನವದೆಹಲಿ: ರಾಷ್ಟ್ರ ರಾಜಧಾನಿಯಕ್ಕು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ 9 ಮಂದಿ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.
ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ CRPF ನ 9 ಸಿಬ್ಬಂದಿಗೂ ಕೊರೊನಾ ಸೋಂಕು
ನವದೆಹಲಿಗೆ ಕರ್ತವ್ಯಕ್ಕೆ ನಿಯೋಜನೆಗೊಡಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದೆ.
ನವದೆಹಲಿಯ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದ 47 ಸಿಆರ್‌ಪಿಎಫ್ ಸಿಬ್ಬಂದಿಯಲ್ಲಿ, 9 ಮಂದಿಗೆ ಸೋಂಕು ತಗುಲಿದೆ. ಸದ್ಯ ಸೋಂಕಿತರನ್ನು ಪ್ರತ್ಯೇಕ ವಾರ್ಡ್ನಲ್ಲಿ ಇರಿಸಲಾಗಿದೆ. ಎಲ್ಲರನ್ನೂ ನವದೆಹಲಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.
ಭಾರತದಲ್ಲಿ ಒಟ್ಟು 24,506 ಪ್ರಕರಣಗಳು ವರದಿಯಾಗಿದ್ದು, 5,063 ಜನರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಪ್ರಸ್ತುತ 18,668 ಜನರು ಚಿಕಿತ್ಸೆ ಪಡೆಯುತ್ತಿದ್ದು, 775 ಜನರು ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.