ರಾಂಚಿ:ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಲಾಲೂ ಪ್ರಸಾದ್ ಯಾದವ್ಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ
ಲಾಲೂ ಪ್ರಸಾದ್ ಯಾದವ್ ಭದ್ರತೆಗೆ ನಿಯೋಜನೆಗೊಂಡಿದ್ದ 9 ಪೊಲೀಸರಿಗೆ ಕೊರೊನಾ ಸೋಂಕು - 9 ಪೊಲೀಸರಿಗೆ ಕೊರೊನಾ ಸೋಂಕು
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಭದ್ರತೆಗೆ ನಿಯೋಜನೆಗೊಂಡಿದ್ದ 30 ಪೊಲೀಸ್ ಸಿಬ್ಬಂದಿ ಪೈಕಿ 9 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಲಾಲೂ ಪ್ರಸಾದ್ ಯಾದವ್ಗೂ ಸೋಂಕಿನ ಭೀತಿ ಶುರುವಾಗಿದೆ.
ಲಾಲೂ ಪ್ರಸಾದ್ ಯಾದವ್ ಇದ್ದ ರಿಮ್ಸ್ ಆಸ್ಪತ್ರೆಯ ವಾರ್ಡ್ನಲ್ಲಿ ಕೆಲವರಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಹೀಗಾಗಿ ಅವರನ್ನು ರಿಮ್ಸ್ ನಿರ್ದೇಶಕರ ಬಂಗಲೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗೆ ಮತ್ತೊಮ್ಮೆ ಸೋಂಕಿನ ಭೀತಿ ಶುರುವಾಗಿದ್ದು, ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಆಗಸ್ಟ್ 10 ರಂದು, ಲಾಲೂ ಯಾದವ್ ಅವರ ಭದ್ರತೆಗೆ ನಿಯೋಜಿಸಲಾದ 30 ಪೊಲೀಸ್ ಸಿಬ್ಬಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 9 ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಂಡುಬಂದಿದೆ. ಲಾಲೂ ಪ್ರಸಾದ್ ಅವರ ಭದ್ರತೆಗೆ ನೇಮಕಗೊಂಡ ಇತರ ಪೊಲೀಸ್ ಸಿಬ್ಬಂದಿಗೂ ಸೋಂಕಿನ ಭೀತಿ ಶುರುವಾಗಿದೆ.