ನೋಯ್ಡಾ(ಉತ್ತರಪ್ರದೇಶ): ಕೋವಿಡ್ನಿಂದ ಬಳಲುತ್ತಿದ್ದ 94 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಇವರು ಇಲ್ಲಿನ ಶಾರದಾ ಆಸ್ಪತ್ರೆಗೆ ಕೋವಿಡ್ ಸೋಂಕಿನಿಂದಾಗಿ ದಾಖಲಾಗಿದ್ದರು. ಯಾರೂ ಊಹೆ ಮಾಡದ ರೀತಿಯಲ್ಲಿ ಅವರು ಗುಣಮುಖರಾಗಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಟ್ವೀಟ್ ಮಾಡಿದ್ದಾರೆ.
ಸರ್, ನಾವು ಇನ್ನಷ್ಟು ಶ್ರಮವಹಿಸಲು ನೀವು ನಮ್ಮನ್ನು ಪ್ರೇರೇಪಿಸಿದ್ದೀರಿ. ಬಹಳ ದೀರ್ಘ ಮತ್ತು ಆರೋಗ್ಯಕರ ಜೀವನ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಜಿಲ್ಲಾಧಿಕಾರಿ ಸುಹಾಸ್ ಟ್ವೀಟ್ ಮಾಡಿದ್ದಾರೆ.
ಗೌತಮ ಬುದ್ಧ ನಗರದಲ್ಲೇ ಇಂದು 60 ಜನರು ಕೋವಿಡ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 42 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಜಿಲ್ಲೆಯಲ್ಲಿ 632 ಪ್ರಕರಣಗಳ ಪೈಕಿ ಸದ್ಯ 195 ಆ್ಯಕ್ಟಿವ್ ಕೇಸ್ಗಳಿವೆ. ಇದರಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.