ಲಖನೌ:ಉತ್ತರಪ್ರದೇಶದ ಶಾಮ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದ ಕೊರೊನಾ ಶಂಕಿತ ರೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೊನಾ ಶಂಕಿತ ವ್ಯಕ್ತಿ - ಶಂಕಿತ ಕೊರೊನಾ ವ್ಯಕ್ತಿ
ಮಹಾಮಾರಿ ಕೊರೊನಾ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
a-corona-suspect-suicide-in-government-hospital-in-shamli
ಕೊರೊನಾ ಗುಣಲಕ್ಷಣಗಳು ಈತನಲ್ಲಿ ಕಂಡು ಬಂದ ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜತೆಗೆ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಜತೆಗೆ ಆತನನ್ನು ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಇದೇ ವೇಳೆ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾರ್ಚ್ 31ರಂದು ಈ ವ್ಯಕ್ತಿಯನ್ನ ಆಸ್ಪತ್ರೆಯಲ್ಲಿಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿತ್ತು. ಆದರೆ, ಯಾವ ರೀತಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.