ಗುಂಟೂರು :ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಅವಾಂತರ ಸೃಷ್ಟಿಸಿದ್ದಾನೆ. ಹಾರ್ನ್ ಹೊಡೆದನೆಂಬ ಕಾರಣಕ್ಕೆ ಕೋಪಗೊಂಡ ಆ ವ್ಯಕ್ತಿ ಇಬ್ಬರಿಗೆ ಚಾಕುವಿನಿಂದ ಹಲ್ಲೆಗೊಳಿಸಿರುವ ಘಟನೆ ಚೆರುಕುಪಲ್ಲಿ ಗ್ರಾಮದಲ್ಲಿ ನಡೆದಿದೆ.
ಹಾರ್ನ್ ಹೊಡೆದ ಕಾರಣಕ್ಕೆ ಇಬ್ಬರಿಗೆ ಚಾಕುವಿನಿಂದ ಚುಚ್ಚಿದ ಭೂಪ!! - ಗುಂಟೂರು ಅಪರಾಧ ಸುದ್ದಿ
ಇದನ್ನು ಗಮನಿಸಿದ ಸ್ಥಳೀಯರು ಆರೋಪಿ ಶಶಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರಿಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ..
ಇಲ್ಲಿನ ನಿವಾಸಿ ಶಶಿ ಎಂಬ ಯುವಕ ಬೈಕ್ನಲ್ಲಿ ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಆಟೋ ಹಾರ್ನ್ ಹೊಡಿದಿದೆ. ಕುಡಿದ ಮತ್ತಿನಲ್ಲಿದ್ದ ಶಶಿ ಕೋಪಗೊಂಡು ಆಟೋ ಡ್ರೈವರ್ ಸುನೀಲ್ (40) ಮತ್ತು ಆತನ ಪಕ್ಕದಲ್ಲಿದ್ದ ಚುಕ್ಕ ಸುಮಂತ್ (20) ಎಂಬಿಬ್ಬರಿಗೂಚಾಕುವಿನಿಂದ ದಾಳಿ ಮಾಡಿದ್ದಾನೆ.
ಇದನ್ನು ಗಮನಿಸಿದ ಸ್ಥಳೀಯರು ಆರೋಪಿ ಶಶಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರಿಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.