ಬಹ್ರೇಚ್ (ಉತ್ತರ ಪ್ರದೇಶ): ಇಲ್ಲಿನ ದೇಹತ್ ಕೊಟ್ವಾಲಿ ಪ್ರದೇಶದ ಮೊಹರಾನಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಮದ್ಯ ಸೇವಿಸಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪ್ರಕಾರ, ಕುಡುಕ ತನ್ನ ಹೆಂಡತಿಯ ಅನುಪಸ್ಥಿತಿಯ ಲಾಭವನ್ನು ಪಡೆದುಕೊಂಡು ಬಾಲಕಿಯ ಮೇಲೆ ಈ ಕೃತ್ಯವನ್ನು ಎಸಗಿದ್ದಾನೆ ಎಂದಿದ್ದಾರೆ.
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಕುಡುಕ ತಂದೆ - ಹೆಂಡತಿಯ ಅನುಪಸ್ಥಿತಿಯ ಲಾಭವನ್ನು ಪಡೆದುಕೊಂಡು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ತಂದೆ
ಸ್ವತಹ ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ದುಷ್ಕೃತ್ಯ ಉತ್ತರ ಪ್ರದೇಶದ ದೇಹತ್ ಕೊಟ್ವಾಲಿ ಪ್ರದೇಶದ ಮೊಹರಾನಾ ಗ್ರಾಮದಲ್ಲಿ ನಡೆದಿದೆ.
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಕುಡುಕ ತಂದೆ
ನನ್ನ ತಾಯಿಯ ಮನೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನೆಯಿಂದ ದೂರದಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸಂತ್ರಸ್ತೆಯ ತಾಯಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪರಾಧಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಾಲಕಿಯ ತಾಯಿಯ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಈ ವಿಷಯದಲ್ಲಿ ನಾವು ಹೆಚ್ಚಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಬಹ್ರೇಚ್ ಸಿಟಿ ಸಿಒ ತ್ರಯಂಬಾಕ್ ನಾಥ್ ದುಬೆ ಹೇಳಿದ್ದಾರೆ.