ವಿಶಾಖಪಟ್ಟಣಂ:ಸಾಲದ ಹೊರೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ನಡೆದಿದೆ.
ಲಾಡ್ಜ್ನಲ್ಲಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! - ಕುಟುಂಬದ ನಾಲ್ವರು ಆತ್ಮಹತ್ಯೆ
ಇಬ್ಬರು ಮಕ್ಕಳು ಸೇರಿ ನಾಲ್ವರು ಲಾಡ್ಜ್ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಶಾಖಪಟ್ಟಣಂದಲ್ಲಿ ನಡೆದಿದೆ.
visakhapatnam news
ವಿಶಾಖಪಟ್ಟಣಂ ಆರ್ಟಿಸಿ ಕಾಂಪ್ಲೆಕ್ಸ್ನ ಅಶ್ವಿನಿ ಲಾಡ್ಜ್ನಲ್ಲಿ ನಾಲ್ವರು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಲಾಡ್ಜ್ನ 106ನೇ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಅಪ್ಪಲರಾಜು- ಮಾನಸ ದಂಪತಿ ಹಾಗೂ ಮಗಳು ಕೀರ್ತಿ(6) ಮಗ ಸ್ವಾತ್ವಿಕ್ (5) ಮೃತರು ಎಂದು ಗುರುತಿಸಲಾಗಿದೆ.
ಇವರು ಪೆಂಡೂರ್ತಿ ಬಂಧುವನಿಪಲೆಂನ ನಿವಾಸಿಗಳು ಎಂದು ತಿಳಿದು ಬಂದಿದೆ. ಸಾಲದ ಸಮಸ್ಯೆಯಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸೊಸೈಡ್ ನೋಟ್ನಲ್ಲಿ ಬರೆದಿಟ್ಟಿದ್ದಾರೆ. ಆತ್ಮಹತ್ಯೆ ಬಗ್ಗೆ ದ್ವಾರಕಾ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.