ಶ್ರೀನಗರ : ಜಮ್ಮು ಕಾಶ್ಮೀರದ ಪೂಂಚ್‌ನ ಕೇರನಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಾಲಕಿಗೆ ಗುಂಡು ಹಾರಿದ ಪರಿಣಾಮ ಗಾಯಗೊಂಡಿದ್ದಾಳೆ.
ಪಾಕ್ ಕದನ ವಿರಾಮ ಉಲ್ಲಂಘನೆ : ಗುಂಡಿನ ದಾಳಿಯಲ್ಲಿ ಬಾಲಕಿಗೆ ಗಾಯ - ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಾಲಕಿಗೆ ಗಾಯವಾಗಿದ್ದು, ಆಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.
ಗುಂಡಿನ ದಾಳಿಯಲ್ಲಿ ಬಾಲಕಿಗೆ ಗಾಯ
ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುವುದು ಹಾಗೂ ಆಕೆಗೆ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದು ಅಧಿಕಾರಿ ರಾಹುಲ್ ಯಾದವ್ ತಿಳಿಸಿದ್ದಾರೆ.
ಇನ್ನು, ನಿನ್ನೆ ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಯೋಧ ಹಾಗೂ ಒಂಬತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಜಮ್ಮು- ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದಿದೆ.