ಮಾನಸಿಕ ಖಿನ್ನತೆ... ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಬ್ ಇನ್ಸ್ಪೆಕ್ಟರ್! - ಸೈದುಲು ಗೌಡ್ ಸಬ್ ಇನ್ಸ್ಪೆಕ್ಟರ್
2007ನೇ ಬ್ಯಾಚ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಬ್ ಇನ್ಸ್ಪೆಕ್ಟರ್
ಅಂಬರಪೇಟ್(ಹೈದರಾಬಾದ್):ಸೆಂಟ್ರಲ್ ಕ್ರೈಂ ಸ್ಟೇಷನ್ನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೈದುಲು ಗೌಡ್(42) ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
2007ನೇ ಬ್ಯಾಚ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸೈದುಲು ಗೌಡ್ ಅಂಬರ್ಪೇಟ್ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಕಳೆದ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು, ಇಂದು ಬೆಳಗ್ಗೆ 8.20ರ ವೇಳೆಗೆ ನೇಣಿಗೆ ಶರಣಾಗಿದ್ದಾರೆ. ಹೆಂಡತಿ ಮನೆಗೆ ವಾಪಸ್ ಬಂದು ನೋಡುವಷ್ಟರಲ್ಲಿ ಗಂಡ ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಷಯವನ್ನ ಆಕೆ ಪೊಲೀಸರಿಗೆ ಪೋನ್ ಮಾಡಿ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.