ಮುಜಾಫ್ಫರ್ಪುರ್: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ನನ್ನು ಎಲ್ಲರು ನೋಡುತ್ತಿದ್ದಂತೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಮಣಿಯಾರಿಯಲ್ಲಿ ನಡೆದಿದೆ.
ಹಾಡಹಗಲೇ ಪೊಲೀಸ್ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು ಪೊಲೀಸ್ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು...!
ಎಂದಿನಂತೆ ಪೊಲೀಸ್ ಕಾನ್ಸ್ಟೇಬಲ್ ಮೊಹಮ್ಮದ್ ಜೈದ್ ಕರ್ತವ್ಯಕ್ಕೆ ತೆರಳುತ್ತಿದ್ದರು. ಆದ್ರೆ ದುಷ್ಕರ್ಮಿಗಳು ಹೊಂಚು ಹಾಕಿ ಅವರ ಬರುವಿಕೆಗೆ ಕಾಯುತ್ತಿದ್ದರು. ಮೊಹಮ್ಮದ್ ಜೈದ್ನನ್ನು ಕಂಡ ದುಷ್ಕರ್ಮಿಗಳು ಜನ ಸಮೂಹದ ನಡುವೆ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಚಿಕಿತ್ಸೆ ಫಲಿಸದೇ ಸಾವು...!
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಜೈದ್ನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಆದ್ರೆ ಮೊಹಮ್ಮದ್ ಜೈದ್ ಗುಂಡೇಟಿನಿಂದ ತೀವ್ರ ಗಾಯಗೊಂಡಿರುವುದರಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.
ಮದ್ಯ ಮಾಫಿಯಾ...!
ಈ ಘಟನೆಗೆ ಮುಖ್ಯ ಕಾರಣ ಮದ್ಯ ಮಾಫಿಯಾ. ಹೌದು, ಮದ್ಯ ಮಾಫಿಯಾದ ಆರೋಪಿಗಳನ್ನು ಹಿಡಿಯುವಲ್ಲಿ ಮೊಹಮ್ಮದ್ ಜೈದ್ ಪಾತ್ರ ಪ್ರಮುಖವಾಗಿತ್ತು. ಹೀಗಾಗಿ ದುಷ್ಕರ್ಮಿಗಳು ಮೊಹಮ್ಮದ್ ಜೈದ್ ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗ್ತಿದೆ.
ಬೆದರಿಕೆ ಕರೆ...!
ಮದ್ಯ ಮಾಫಿಯಾ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೊಹಮ್ಮದ್ ಜೈದ್ಗೆ ಆಗಾಗ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಠಾಣೆಯಲ್ಲಿ ತಿಳಿಸಿದ್ರೂ ಸಹ ಯಾವುದೇ ಪ್ರಯೋಜವಾಗಲಿಲ್ಲ. ನಡು ಬೀದಿಯಲ್ಲೇ ಮೊಹಮ್ಮದ್ ಜೈದ್ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪೊಲೀಸ್ ಅಧಿಕಾರಿ ಹೇಳಿದ್ದು ಹೀಗೆ...
ಕಾನ್ಸ್ಟೇಬಲ್ ಮೊಹಮ್ಮದ್ ಜೈದ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇವರು ಮದ್ಯ ಮಾಫಿಯಾ ತಂಡ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಆರೋಪಿಗಳು ಇವರನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಸೆರೆ ಹಿಡಿಯುವುದಾಗಿ ಪೊಲೀಸ್ ಅಧಿಕಾರಿ ಸೈಯದ್ ಇಮ್ರಾನ್ ಮಸೂದ್ ತಿಳಿಸಿದ್ದಾರೆ.