ಇಸ್ಲಾಮಾಬಾದ್:ದೇಶದ್ರೋಹ ಆರೋಪದಡಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ.
ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ಗೆ ಗಲ್ಲು ಶಿಕ್ಷೆ ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪರ್ವೇಜ್ ಮುಷರಫ್ ಇದೀಗ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೆಳ ನ್ಯಾಯಾಲಯವು ವಿಧಿಸಿರುವ ಗಲ್ಲು ಶಿಕ್ಷೆಯಿಂದ ವಿನಾಯ್ತಿ ನೀಡುವಂತೆ ಮುಷರಫ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿತ್ತು.
2016 ರಿಂದ ಮುಷರಫ್ ವೈದ್ಯಕೀಯ ಚಿಕಿತ್ಸೆಗಾಗಿ ದುಬೈನಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ನವೆಂಬರ್ 3, 2007 ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಕ್ಕಾಗಿ ಮುಷರಫ್ ವಿರುದ್ಧ ದೇಶದ್ರೋಹ ಪ್ರಕರಣದ ದಾಖಲಾಗಿತ್ತು.