ತಮಿಳುನಾಡು: ಸಮಾಜ ಸುಧಾರಕ ಹಾಗೂ ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ರಾಮಸ್ವಾಮಿಯ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ನಡೆದಿದೆ.
ರಜನಿ ಹೇಳಿಕೆ ವಿವಾದದ ಬೆನ್ನಲ್ಲೇ ಪೆರಿಯಾರ್ ಪ್ರತಿಮೆ ಧ್ವಂಸ - ಪೆರಿಯಾರ್ ಕುರಿತು ರಜನಿ ಹೇಳಿಕೆ
ಸಮಾಜ ಸುಧಾರಕ ಹಾಗೂ ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ರಾಮಸ್ವಾಮಿಯ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಜನವರಿ 14ರಂದು ತಮಿಳುನಾಡಿನಲ್ಲಿ ನಡೆದ ತಮಿಳು ತುಘಲಕ್ ಪತ್ರಿಕೆಯ 50ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನೀಕಾಂತ್, ಪೆರಿಯಾರ್ ರಾಮಸ್ವಾಮಿ ಕುರಿತು ಹೇಳಿಕೆಯನ್ನು ನೀಡಿ ವಿವಾದದ ಸುಳಿಯಲ್ಲಿ ಸಿಲುಕಿದ್ದರು. 1971ರಲ್ಲಿ ಪೆರಿಯಾರ್ ರಾಮಸ್ವಾಮಿ ಅವರ ನೇತೃತ್ವದಲ್ಲಿ ಮೌಢ್ಯತೆ ನಿರ್ಮೂಲನೆಗೆ ನಡೆದ ಮೆರವಣಿಗೆಯಲ್ಲಿ ಸೀತೆ ಮತ್ತು ಶ್ರೀರಾಮನ ಬೆತ್ತಲೆ ಫೋಟೋಗಳನ್ನು ಪ್ರದರ್ಶಿಸಲಾಗಿತ್ತು. ಆ ಫೋಟೋಗಳಿಗೆ ಚಪ್ಪಲಿಹಾರ ಹಾಕಿ ಮೆರವಣಿಗೆ ಮಾಡಲಾಗಿತ್ತು ಎಂದು ರಜನಿಕಾಂತ್ ಹೇಳಿದ್ದರು. ಇದರ ವಿರುದ್ಧ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಇದರ ಬೆನ್ನಲ್ಲೇ ಇಂದು ಚೆಂಗಲ್ಪಟ್ಟುವಿನಲ್ಲಿರುವ ಪೆರಿಯಾರ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.