ಕರ್ನಾಟಕ

karnataka

ETV Bharat / bharat

ಅಹಮದಾಬಾದ್​​ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು - Ahmedabad

ಅಹಮದಾಬಾದ್​​ನ ಕುಬರ್ನಗರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಯುವಕ ಸಾವನ್ನಪ್ಪಿದ್ದಾನೆ. ಗಾಯಗೊಂಡ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

building collapse
ಕಟ್ಟಡ ಕುಸಿತ

By

Published : Aug 28, 2020, 10:55 AM IST

ಅಹಮದಾಬಾದ್: ಗುಜರಾತ್​​ನ ಅಹಮದಾಬಾದ್​​ನ ಕುಬರ್ನಗರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಯುವಕ ಸಾವನ್ನಪ್ಪಿದ್ದಾನೆ.

ಅಹಮದಾಬಾದ್​​ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ

ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದ್ದು, ಈ ವೇಳೆ ಕಟ್ಟಡದಲ್ಲಿ ಮೂವರು ಯುವಕರು ಇದ್ದರು. ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೊಲೀಸ್​ ಸಿಬ್ಬಂದಿ ಮೂವರು ಯುವಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರೇಮಭಾಯ್ ಚರಣ್ ಎಂಬ ಯುವಕ ಮೃತಪಟ್ಟಿದ್ದಾನೆ. ಉಳಿದ ಇಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details