ನವದೆಹಲಿ:ಇಂಗ್ಲೆಂಡ್ನಲ್ಲಿ ಪತ್ತೆಯಾದ ಹೊಸ ಪ್ರಭೇದದ ಕೋವಿಡ್ ವೈರಸ್ ಭಾರತಕ್ಕೂ ದಾಪುಗಾಲಿಟ್ಟಾಗಿದೆ. ದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ ತಗುಲಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕೋವಿಡ್ ಪರೀಕ್ಷೆ ನಡೆಸಲು ದೇಶಾದ್ಯಂತ 10 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (NIV) ನಾಲ್ವರ ಹಾಗೂ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (IGIB) ಪ್ರಯೋಗಾಲಯವು ಒಬ್ಬರ ವರದಿ ಪಾಸಿಟಿವ್ ಬಂದಿರುವುದಾಗಿ ದೃಢಪಡಿಸಿವೆ.