ಕರ್ನಾಟಕ

karnataka

ETV Bharat / bharat

ಪ್ರೇಯಸಿ ಮೇಲೆ ಪೆಟ್ರೋಲ್​​​ ಸುರಿದು ಬೆಂಕಿ ಹಚ್ಚಿದ ಮಾಜಿ ಲವರ್​​​​​​​​​​!

ಖಾಸಗಿ ಕಾಲೇಜ್​ವೊಂದರಲ್ಲಿ ಅರೆಕಾಲಿಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

By

Published : Feb 3, 2020, 11:16 AM IST

A young girl from Wardha
ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಮಾಜಿ ಲವರ್

ವಾರ್ದಾ(ಮಹಾರಾಷ್ಟ್ರ):ಕಾಲೇಜ್​​ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ಮೇಲೆ ದುಷ್ಕರ್ಮಿಯೋರ್ವ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ವಾರ್ದಾದಲ್ಲಿ ನಡೆದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.

ಪ್ರೇಯಸಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಮಾಜಿ ಲವರ್​​

ಈ ಹಿಂದೆ ಇವರಿಬ್ಬರೂ ಪ್ರೀತಿಸುತ್ತಿದ್ದರಂತೆ. ಇದೀಗ ಆಕೆಯ ಬಳಿ ಮದುವೆ ಪ್ರಸ್ತಾಪ ಮಾಡುತ್ತಿದ್ದಂತೆ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಆತ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಆಕೆ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ವಾರ್ದಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರ್​ಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.​​

ABOUT THE AUTHOR

...view details