ಹೈದಾರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ತಂಗಡಪಲ್ಲಿ ಎಂಬಲ್ಲಿ ನಗ್ನ ರೂಪದಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.
ತೆಲಂಗಾಣದಲ್ಲಿ ಇನ್ನೊಂದು ದಿಶಾ ಕೇಸ್ : ಅತ್ಯಾಚಾರ ಎಸಗಿ ಯುವತಿಯ ಹತ್ಯೆ ಶಂಕೆ - Young Woman's body found in Thangadapalli of Telangana
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ತಂಗಡಪಲ್ಲಿ ಎಂಬಲ್ಲಿ ಯುವತಿಯೊಬ್ಬಳ ಮೃತದೇಹ ನಗ್ನವಾಗಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಯುವತಿಯ ಮೃತದೇಹ ಸಾಗಿಸುತ್ತಿರುವುದು
ವಸ್ತ್ರ ರಹಿತವಾಗಿ ಯುವತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸಿಪಿ ರವೀಂದರ್ ರೆಡ್ಡಿ, ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತನಿಖಾ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.