ಹೈದರಾಬಾದ್; ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಈಗ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ.
ಅಭಿಷೇಕ್ ಬಚ್ಚನ್ಗೂ ಕೊರೊನಾ... ಆಸ್ಪತ್ರೆಗೆ ದಾಖಲು - bigf bi
ಬಿಗ್ ಬಿ ಹಾಗೂ ಅಭಿಷೇಕ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು ಅಭಿಮಾನಿಗಳಲ್ಲಿ ತಲ್ಲಣ ಮೂಡಿಸಿದೆ. ಇವರಿಬ್ಬರೂ ಬೇಗನೆ ಗುಣಮುಖರಾಗಲಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಅಭಿಷೇಕ್ ಬಚ್ಚನ್ ಸ್ವತಃ ಈ ವಿಷಯವನ್ನು ಟ್ವಿಟರ್ನಲ್ಲಿ ಬಹಿರಂಗಪಡಿಸಿದ್ದು, "ಇಂದು ನನ್ನ ತಂದೆ ಮತ್ತು ನಾನು ಇಬ್ಬರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರಿಗೂ ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳಿದ್ದು, ನಾವಿಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದೇವೆ. ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಲಾಗಿದ್ದು, ನನ್ನ ಕುಟುಂಬಸ್ಥರು ಹಾಗೂ ಮನೆಯ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಯಾರೂ ಈ ಕುರಿತು ಆತಂಕ ಪಡದೆ, ಶಾತಿಯಿಂದ ಇರಬೇಕು." ಎಂದು ಬರೆದಿದ್ದಾರೆ.
ಬಿಗ್ ಬಿ ಹಾಗೂ ಅಭಿಷೇಕ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು ಅಭಿಮಾನಿಗಳಲ್ಲಿ ತಲ್ಲಣ ಮೂಡಿಸಿದೆ. ಇವರಿಬ್ಬರೂ ಬೇಗನೆ ಗುಣಮುಖರಾಗಲಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳು ಹಾರೈಸುತ್ತಿದ್ದಾರೆ.