ಭೋಪಾಲ:ಮಧ್ಯಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಹೈಡ್ರಾಮ ಹಾಗೂ ಬಂಡಾಯ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಇದು ಕಾಂಗ್ರೆಸ್ ಆಂತರಿಕ ವಿಚಾರ, ಈ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ಕಮಲನಾಥ ಆಡಳಿತದ ವಿರುದ್ಧ ಬಂಡಾಯ ಎದ್ದಿರುವ ಕೈನ 16 ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದೆ. ಇದರಲ್ಲಿ ಆರು ಸಚಿವರು ಇದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ್ನಾಥ್ ನಿನ್ನೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಿದ್ದು, ಬಿಕ್ಕಟ್ಟು ಬಗೆಹರಿಸುವ ಬಗ್ಗೆ ಸಮಾಲೋಚಿಸಿದ್ದಾರೆ. ಇನ್ನು ಆರು ಬಿಜೆಪಿ ಶಾಸಕರು ಬೆಂಗಳೂರಿಗೆ ತಲುಪಿದ್ದಾರೆ ಎಂಬ ಸುದ್ದಿ ಇದೆ.