ನವದೆಹಲಿ:ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯುವುದನ್ನು ಬಿಟ್ಟು ಬೇರೆ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ರೈತರಿಗೆ ಹಾಗೂ ಭಾರತಕ್ಕೆ ಆಗುವ ಮೋಸ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಕಾರಣಕ್ಕೂ ಕಾಯ್ದೆಗಳಲ್ಲಿ ಮಾರ್ಪಾಟು, ಮುಂತಾದ ವಿಚಾರಗಳಿಗೆ ಒಪ್ಪಿಕೊಳ್ಳಬಾರದು ಎಂದು ಟ್ವಿಟರ್ನಲ್ಲಿ ರಾಹುಲ್ ಗಾಂಧಿ ಆಗ್ರಹಿಸಿದ್ದು, ಕೇಂದ್ರ ಸರ್ಕಾರ ಹೊಸ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕೃಷಿ ಕಾಯ್ದೆಗಳ ವಿಚಾರವಾಗಿ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಅವರ ನಡುವೆ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೇಂದ್ರದಲ್ಲಿ 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರವಿದೆ: ರಾಹುಲ್ ಗಾಂಧಿ
ಸದ್ಯಕ್ಕೆ ರಾಷ್ಟ್ರ ರಾಜಧಾನಿ ಹಾಗೂ ಅದರ ಗಡಿಯ ಹಲವೆಡೆ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಂಘು, ನೋಯ್ಡಾ ಘಾಜಿಪುರ್, ಟಿಕ್ರಿ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.