ವಡೋದರಾ:ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ 12 ಮಂದಿ ದುರ್ಮರಣ! - ಭೀಕರ ರಸ್ತೆ ಅಪಘಾತ
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆ.
ಭೀಕರ ರಸ್ತೆ ಅಪಘಾತ
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಅವಘಡದಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಾಯಾಳುಗಳನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ.
Last Updated : Feb 22, 2020, 10:38 PM IST