ಮಲಪ್ಪುರಂ(ಕೇರಳ): ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ತ್ರಿಶೂರ್-ಕೋಯಿಕೋಡ್ ಹೆದ್ದಾರಿಯಲ್ಲಿ ನಡೆದಿದೆ.
ಕೇರಳದಲ್ಲಿ ಭೀಕರ ರಸ್ತೆ ಅಪಘಾತ, ಹಿರಿಯೂರು ಮೂಲದ ಇಬ್ಬರ ಸಾವು! - kerala accident news
ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ಭೀಕರ ಅಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ತ್ರಿಶೂರ್-ಕೋಯಿಕೋಡ್ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪಾಂಡುರಂಗ ಮತ್ತು ಪ್ರಭಾಕರ್ ಎಂದು ಗುರುತಿಸಲಾಗಿದೆ.
![ಕೇರಳದಲ್ಲಿ ಭೀಕರ ರಸ್ತೆ ಅಪಘಾತ, ಹಿರಿಯೂರು ಮೂಲದ ಇಬ್ಬರ ಸಾವು! Accident in Kerala](https://etvbharatimages.akamaized.net/etvbharat/prod-images/768-512-5715532-thumbnail-3x2-jay.jpg)
ಕೇರಳದಲ್ಲಿ ಭೀಕರ ರಸ್ತೆ ಅಪಘಾತ
ಇಲ್ಲಿನ ವಾಲೆಂಕೇರಿ ಸಮೀಪದ ಪಂಡಿಕಸಲ ಚೋಲಾವಲವು ಎಂಬಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಾಲೆಂಕೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳದಲ್ಲಿ ಭೀಕರ ರಸ್ತೆ ಅಪಘಾತ
ಕಳೆದ ರಾತ್ರಿ 11ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದ ಇಬ್ಬರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದವರೆಂದು ಗುರುತಿಸಲಾಗಿದೆ. ಪಾಂಡುರಂಗ ಮತ್ತು ಪ್ರಭಾಕರ್ ಮೃತರು. ಇವರು ಕೇರಳ ಪ್ರವಾಸಕ್ಕೆಂದು ತೆರಳಿದ್ದರು ಎನ್ನಲಾಗಿದೆ.
Last Updated : Jan 15, 2020, 10:09 AM IST