ಮುಂಬೈ:ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಪರೇಶ್ ರಾವಲ್ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. 2017ರಿಂದಲೂ ಖಾಲಿಯಾಗಿದ್ದ ಹುದ್ದೆಗೆ ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪರೇಶ್ ರಾವಲ್ ಅವರನ್ನ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಪರೇಶ್ ರಾವಲ್ ನೇಮಕ! - ರಾಷ್ಟ್ರ ಪ್ರಶಸ್ತಿ ವಿಜೇತ ಪರೇಶ್ ರಾವಲ್ ನೇಮಕ
30ಕ್ಕೂ ಹೆಚ್ಚು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರುವ ನಟ ಪರೇಶ್ ರಾವಲ್ ಇದೀಗ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
Paresh Rawal
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. 65 ವರ್ಷದ ಪರೇಶ್ ರಾವಲ್ ಕಳೆದ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದು, ಹತ್ತಾರು ಪ್ರಶಸ್ತಿ ಗೆದ್ದಿದ್ದಾರೆ. 2014ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ನೀಡಲಾಗಿದೆ.
2014ರಲ್ಲಿ ಅಹಮದಾಬಾದ್ ಪೂರ್ವದಿಂದ ಬಿಜೆಪಿ ಟಿಕೆಟ್ ಪಡೆದುಕೊಂಡು ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ 2019ರಲ್ಲಿ ಅವರು ಚುನಾವಣೆಗೆ ಸ್ಪರ್ಧೆ ಮಾಡಿರಲಿಲ್ಲ.