ಮುಂಬೈ (ಮಹಾರಾಷ್ಟ್ರ):ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅಕ್ರಮ ವಸತಿ ಕಟ್ಟಡ ನಿರ್ಮಾಣ ಆರೋಪ ಕೇಳಿ ಬಂದಿರುವ ಸಮಯದಲ್ಲೇ, ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಹಲವು ಅನುಮಾನಗಳನ್ನು ಮೂಡಿಸಿದೆ.
ಇತ್ತೀಚೆಗಷ್ಟೇ, ಅನುಮತಿಯಿಲ್ಲದೆ ವಸತಿ ಗೃಹವನ್ನು ಹೋಟೆಲ್ ಆಗಿ ಪರಿವರ್ತಿಸಿದ ಆರೋಪದಡಿ ಸೋನು ಸೂದ್ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ದೂರು ದಾಖಲಿಸಿತ್ತು.