ಕರ್ನಾಟಕ

karnataka

By

Published : Feb 24, 2020, 7:51 PM IST

ETV Bharat / bharat

ಪಡಿತರ್​ ಚೀಟಿ - ಆಧಾರ್ ಜೋಡಣೆ.. ಪ್ರತಿಕ್ರಿಯೆ ನೀಡಲು ಎಲ್ಲ ರಾಜ್ಯಗಳಿಗೆ ಸುಪ್ರೀಂ ಸೂಚನೆ

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಅಧಾರ್ ಅವಶ್ಯಕತೆ ಮತ್ತು ವಿವಿಧ ಯೋಜನೆಗಳಿಗೆ ಆಧಾರ್ ಸಂಪರ್ಕದ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದೆ. ಮುಂದಿನ 4 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

Supreme Court
ಸುಪ್ರೀಂಕೋರ್ಟ್​

ನವದೆಹಲಿ: ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಆಗದಿದ್ದರೇ ಪಡಿತರ ನೀಡದಿರುವ ಕುರಿತು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಪ್ರತಿಕ್ರಿಯೆಗಳನ್ನು ನೀಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಅಧಾರ್ ಅವಶ್ಯಕತೆ ಮತ್ತು ವಿವಿಧ ಯೋಜನೆಗಳಿಗೆ ಆಧಾರ್ ಸಂಪರ್ಕದ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನಡೆಸಿತು. ಮುಂದಿನ 4 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಆಧಾರ್ ಅವಶ್ಯಕತೆ ಮತ್ತು ಜೋಡಣೆಯು 3 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕಾರಣವಾಗಿದೆ. ಶೇ. 85ರಷ್ಟು ಕುಟುಂಬಗಳು ಪಡಿತರ ಆಹಾರದಿಂದ ವಂಚಿತವಾಗಿವೆ. ಅನೇಕ ಜನರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ವಾದಿಸಿದರು.

ರಾಜ್ಯಗಳ ಅಭಿಪ್ರಾಯಗಳನ್ನು ಕೋರಿ ಸುಪ್ರೀಂ, ಇಂದು ಎರಡನೇ ಬಾರಿ ಸೂಚನೆ ನೀಡಿದೆ. ನಾಲ್ಕು ವಾರಗಳ ಹಿಂದೆ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಆದರೆ, ಜಾರ್ಖಂಡ್, ನಾಗಲ್ಯಾಂಡ್ ಮತ್ತು ತಮಿಳುನಾಡು ಬಿಟ್ಟರೆ ಬೇರೆ ಯಾವುದೇ ರಾಜ್ಯಗಳು ಪ್ರತಿಕ್ರಿಯೆ ನೀಡಿರಲಿಲ್ಲ.

ABOUT THE AUTHOR

...view details