ಲಕ್ನೋ:ಹೃದಯ ಕಾಯಿಲೆಯಿಂದ ಬಳಲುತ್ತಿರುವ ಬಿ.ಎಡ್ ವಿದ್ಯಾರ್ಥಿನಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಾಯಹಸ್ತ ಚಾಚಿದ್ದು, ಶಸ್ತ್ರ ಚಿಕಿತ್ಸೆಗಾಗಿ 9.90 ಲಕ್ಷ ರೂ. ಅನುದಾನ ನೀಡಿದ್ದಾರೆ.
ವಿದ್ಯಾರ್ಥಿನಿಯ ಹೃದಯ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡಿದ ಯುಪಿ ಸಿಎಂ - ಮೆಡಂತ ಆಸ್ಪತ್ರೆ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಯುಪಿಯ ವಿದ್ಯಾರ್ಥಿನಿಯ ಶಸ್ತ್ರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಾಯಹಸ್ತ ಚಾಚಿದ್ದು, ಶಸ್ತ್ರ ಚಿಕಿತ್ಸೆಗಾಗಿ 9.90 ಲಕ್ಷ ರೂ.ಗಳ ಅನುದಾನ ಮಂಜೂರು ಮಾಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಗೋರಖ್‌ಪುರ ಜಿಲ್ಲೆಯ ಕ್ಯಾಂಪಿಯರ್‌ಗಂಜ್‌ನಲ್ಲಿರುವ ಮಕ್ಲಿಗಾಂವ್ ನಿವಾಸಿ ಮಧುಲಿಕಾ ಮಿಶ್ರಾ ಅವರ ತಂದೆಗೆ ಯೋಗಿ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವಿದ್ಯಾರ್ಥಿನಿಯ ಹೃದಯ ಕವಾಟಗಳ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಶಸ್ತ್ರ ಚಿಕಿತ್ಸೆಗಾಗಿ 9.90 ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ವಿವೇಚನಾ ನಿಧಿಯಿಂದ ನೀಡಲಾಗುತ್ತದೆ ಎಂದಿದ್ದಾರೆ.
ಸದ್ಯ ವಿದ್ಯಾರ್ಥಿನಿಗೆ ಮೆದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.