ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ ಕೆ ಅಡ್ವಾಣಿ ಹೇಳಿಕೆಯನ್ನು ಇಂದು ದಾಖಲಿಸಲಾಗುವುದು.
ಇಂದು ಉತ್ತರಪ್ರದೇಶದ ಲಖನೌದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ಕೆ ಅಡ್ವಾಣಿ ಅವರಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಹೇಳಿಕೆ ದಾಖಲಿಸಿಕೊಳ್ಳಲಿದೆ.

ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 313ರ ಅನುಸಾರ ಹೇಳಿಕೆಯನ್ನು ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳಲಿದೆ.
ಇಂದು ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಇದ್ದರಿಂದ ಮೊನ್ನೆಯೇ ಗೃಹ ಸಚಿವ ಅಮಿತ್ ಶಾ ಹಿರಿಯ ನಾಯಕನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕೋರ್ಟ್ ವಿಚಾರಣೆ ಸಂಬಂಧ ಮಾತುಕತೆ ನಡೆಸಿದ್ದರು.
ಅಲ್ಲದೇ ಆಗಸ್ಟ್ 5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಬಗ್ಗೆಯೂ ಹಿರಿಯ ನಾಯಕನೊಂದಿಗೆ ಗೃಹ ಸಚಿವರು ಮಾತನಾಡಿದರು. ಅಮಿತ್ ಶಾ ಜೊತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸಹ ಇದ್ದರು.